ಬೆಳ್ತಂಗಡಿ: ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ಯವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಸಂದೇಶ್.ಪಿ.ಜಿ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿ ಅಕೌಂಟ್ ಗೆ ಹಣ ಹಾಕುವಂತೆ ಮೇಸೆಜ್ ಹಾಕುತ್ತಿರುವುದು ಬೆಳಕಿಗೆ ಬಂದಿದೆ. ಹಾಗೆಯೇ ಫೇಸ್‌ಬುಕ್ ನಲ್ಲಿದ್ದ ಎಲ್ಲಾ ಫೋಟೋಗಳನ್ನು ಬದಲಿಸಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮ ಮತ್ತು ಪೊಲೀಸ್ ಇಲಾಖೆಯ ಮಾಹಿತಿಗಳನ್ನು ಜನರಿಗೆ ತಿಳಿಸಲು ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿಯವರು ಫೇಸ್ ಬುಕ್ ಖಾತೆ ಹೊಂದಿದ್ದು, ಇದೀಗ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಖಾತೆಗೆ ಹಣ ಹಾಕುವಂತೆ ಮನವಿ ಮಾಡಲಾಗಿದೆ.
ನನ್ನ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಹಣ ಕೇಳುತ್ತಿದ್ದಾರೆ. ನಾನು ಯಾವತ್ತೂ ಯಾರ ಬಳಿಯೂ ಹಣ ಕೇಳಿಲ್ಲ. ದಯವಿಟ್ಟು ಇಂತಹ ಮೆಸೇಜ್ ಗಳ ಬಗ್ಗೆ ಎಚ್ಚರದಿಂದಿರಿ” ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿಯವರು ಮನವಿ ಮಾಡಿಕೊಂಡಿದ್ದಾರೆ.