ಬೆಳ್ತಂಗಡಿ ಕಡ್ಯಾರು ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಕಡ್ಯಾರಿನಲ್ಲಿ ನಡೆದ ಸ್ಫೋಟದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಸದ್ರಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಇದರ ಬೇರೆ ವ್ಯವಸ್ಥೆಗೆ ಏನಾದರೂ ನಂಟು ಇದೆಯೋ ಬಡಕಾರ್ಮಿಕರ ಸಾವಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಆಗಬೇಕಾಗಿದೆ ಈ ನಿಟ್ಟಿನಲ್ಲಿ ಸದ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಪೈಕಿ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕೇಡಿ ಗ್ರಾಮದ ಕಡ್ತ್ಯಾರು ಪಟಾಕಿ ತಯಾರಿಕಾ ಗೋಡೌನ್ ನಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಸೈಯದ್ ಬಶೀರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇರೆಗೆ ಸುಡುಮದ್ದು ತಯಾರಿಕಾ ಘಟಕದ ಮಾಲೀಕ ಬಶೀರ್‌ ಮೇಲೆ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರ ನೇತೃತ್ವದಲ್ಲಿ ಸುಳ್ಯದಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರ ದೇಹ ಛಿದ್ರವಾಗಿ ಹೋಗಿತ್ತು. ರವಿವಾರ ಮಧ್ಯರಾತ್ರಿ ವರೆಗೂ ಶೋಧಕಾರ್ಯ ನಡೆಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ, ಫೋರೆನಿಕ್ಸ್ ತಂಡ ದೇಹದ ಭಾಗಗಳನ್ನು ಪತ್ತೆಹಚ್ಚಿದೆ‌.

ಪಟಾಕಿ ತಯಾರಿಕಾ ಘಟಕಕ್ಕೆ ಎಸ್.ಪಿ. ಕಚೇರಿಯಿಂದ ಅನುಮತಿ ಪಡೆದಿದ್ದರೂ ಕೂಡ, ಫೈರ್ ಆ್ಯಂಡ್ ಸೇಫ್ಟಿ ವಿಚಾರವಾಗಿ ಅಗ್ನಿಶಾಮಕದಳದಿಂದ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹೀಗಿದ್ದರೂ ಪಟಾಕಿ ಗೋದಾಮಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಮತಿ ನೀಡಿದ್ದಾದರು ಹೇಗೆ? ಸ್ಥಳದಲ್ಲಿ ದೊರೆತ ಬಾಂಬ್ ರೂಪ್ ವಸ್ತುಗಳ ತಯಾರಿಗೆ ಅನುಮತಿ ಇತ್ತೇ ? ಪರಿಣತರಲ್ಲದ ಕಾರ್ಮಿಕರನ್ನು ಬಳಸಿ ಕೃತ್ಯ ನಡೆಸಲಾಗುತ್ತಿತ್ತೇ ಎಂಬುದರ ಬಗ್ಗೆ ಪೊಲೀಸ್ ತನಿಖೆಯಿಂದ ಮಾಹಿತಿ ಹೊರಬರಬೇಕಿದೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 17 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 22 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 39 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 213 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 62 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ