ಬೆಳ್ತಂಗಡಿ: ರಾಜ್ಯದ ಇತರ ಪ್ರದೇಶಗಳಿಗಿಂತ ಭೌಗೋಳಿಕವಾಗಿ ಭಿನ್ನವಾಗಿರುವ ಕರಾವಳಿ ಜನತೆ ವಿಭಿನ್ನ ರೀತಿಯ ಸಂಕಷ್ಟಕ್ಕೊಳಗಾಗಿದ್ದು ಜಿಲ್ಲೆಯ ಶ್ರಮಿಕ ವರ್ಗಕ್ಕೆ ಹೆಚ್ಚುವರಿಯಾಗಿ ಪ್ಯಾಕೇಜ್ ಘೋಷಿಸುವಂತೆ ಮನವಿ ಸಲ್ಲಿಸಲಾಯಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಖುದ್ದು ಭೇಟಿಯಾಗಿ ಇಂದು ಮನವಿ ಮಾಡಿದರು.
ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ಬಸ್ಸುಗಳು ಸಂಚರಿಸುವುದರಿಂದ ಅವುಗಳಲ್ಲಿ ದುಡಿಯುತ್ತಿರುವ ಚಾಲಕರು, ನಿರ್ವಾಹಕರು, ಖಾಸಗಿ ಶಿಕ್ಷಣ ಸಂಸ್ಥೆಗಳ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು, ಪುರೋಹಿತ ವರ್ಗದವರು, ಧರ್ಮಧೈವಗಳ ಪರಿಚಾರಕರು, ಹೋಟೆಲ್ ಕಾರ್ಮಿಕರು, ಕಲ್ಯಾಣ ಮಂಟಪ ಮತ್ತು ದ್ವನಿ ಬೆಳಕು ಶಾಮಿಯಾನದಲ್ಲಿ ದುಡಿಯುವ ಕಾರ್ಮಿಕ ವರ್ಗದವರು, ಗೇರುಬೀಜ ಕಾರ್ಖಾನೆ, ಬೀಡಿ ಮತ್ತು ಇನ್ನಿತರ ವಲಯಗಳಲ್ಲಿ ದುಡಿಯುವ ಕಾರ್ಮಿಕ ವರ್ಗದ ಜನರು ಲಾಕ್ಡೌನ್ನಿಂದಾಗಿ ಜೀವನೋಪಾಯಕ್ಕಾಗಿ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.