ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರವರು ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಲು ಬೆಳ್ತಂಗಡಿ ಪೊಲೀಸರು ಹರೀಶ್ ಪೂಂಜ ಅವರ ಮನೆಗೆ ಆಗಮಿಸಿದ್ದು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮನೆಯತ್ತ ಧಾವಿಸಿದ್ದಾರೆ.
ಬೆಳ್ತಂಗಡಿ ಪೊಲೀಸರ ತಂಡ ಶಾಸಕರ ಮನೆಯಲ್ಲಿದ್ದು ಅವರನ್ನು ಬಂಧಿಸುವ ನಿರೀಕ್ಷೆಯಿದೆ. ಪೊಲೀಸ್ ಅಧಿಕಾರಿಗಳು ಮನೆಯ ಒಳಗೆ ಇದ್ದು ಮಾತುಕತೆ ನಡೆಯುತ್ತಿದೆ.
ಸ್ಥಳಕ್ಕೆ ನೂರಾರು ಸಂಖ್ಯೆಯಲ್ಲಿ ಕಾರ್ಯ ಕರ್ತರು ಆಗಮಿಸುತ್ತಿದ್ದು ಮನೆಗೆ ಬರುವ ರಸ್ತೆ ಬಹುತೇಕ ಬಂದ್ ಆದಂತಾಗಿದೆ. ಹೆಚ್ಚಿನ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದು ಸ್ಥಳದಲ್ಲಿ ಬಿಗುವಿನ ಸ್ಪರಿಸ್ಥಿತಿ ನಿರ್ಮಾಣವಾಗಿದೆ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ಒಳಪಟ್ಟ ಕಾಲೇಜಿನಲ್ಲಿ ಫಲಿತಾಂಶ ತಡವಾಗಿ ಪ್ರಕಟಿಸುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ. ವಿಶ್ವವಿದ್ಯಾಲಯದ ಫಲಿತಾಂಶಗಳು ತಡವಾಗಿ ಬರುತ್ತಿರುವುದರಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಬೇರೆ ವಿಶ್ವವಿದ್ಯಾಲಯದಲ್ಲಿ ತಮ್ಮ ವಿದ್ಯಾಭ್ಯಾಸ ನಡೆಸಲು ಸಾಧ್ಯವಾಗುತ್ತಿಲ್ಲ ಹಾಗೂ ಮೊದಲ ಸೆಮಿಸ್ಟರ್ ನಿಂದ ಆರನೇ…