ದ.ಕ ಜಿಲ್ಲೆ ಬೆಳ್ತಂಗಡಿಯ ಯಾಕೂಬ್, ಕಲಬುರಗಿಯ ಸುರೇಖಾ ಸೇರಿದಂತೆ ಒಟ್ಟು 47 ಶಿಕ್ಷಕರು ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್, ಕಲಬುರಗಿಯ ಅಫ್ಷಲ್ ಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್ ಸೇರಿದಂತೆ ಒಟ್ಟು 47 ಶಿಕ್ಷಕರಿಗೆ 2020ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನು ಘೋಷಿಸಲಾಗಿದೆ.

ಬೆಳ್ತಂಗಡಿ ತಾಲೂಕು ನಡ ಪ್ರೌಢ ಶಾಲೆಯ ಗಣಿತ ಶಿಕ್ಷಕ , ಶಾಲೆಯ ಗಣಿತ ಪ್ರಯೋಗಾಲಯದ ರೂವಾರಿ ಯಾಕೂಬ್‌ರವರನ್ನು ಶಿಕ್ಷಣ ಇಲಾಖೆ ಪ್ರಸಕ್ತ ವರ್ಷದ ರಾಷ್ಟ್ರ ಮಟ್ಟದ ಉತ್ತಮ‌ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಸೆಪ್ಟೆಂಬರ್ 5ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಘನತೆವೆತ್ತ ರಾಮನಾಥ ಕೋವಿಂದ್ ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯವು ಈ ಸಾಲಿನ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು ಅದರಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಶಿಕ್ಷಕರು ಪ್ರಶಸ್ತಿ ಪುರಸ್ಕೃತರಾಗಿರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ.

ಈ ಸಚಿವಾಲಯವು ನೇಮಕ ಮಾಡಿದ್ದ ಸ್ವತಂತ್ರ ತೀರ್ಪುಗಾರರ ಸಮಿತಿಯು ಈ ಪಟ್ಟಿಯನ್ನು ಅಂತಿಮಗೊಳಿಸಿದೆ. 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ 7 ಸಾಂಸ್ಥಿಕ ಆಯ್ಕೆ ಸಮಿತಿ ಅಂತಿಮಗೊಳಿಸಿದ್ದ 153 ಶಿಕ್ಷಕರ ಅರ್ಜಿಯನ್ನು ಪರಿಶೀಲಿಸಿ ಒಟ್ಟು 45 ಶಿಕ್ಷಕರನ್ನು ಈ ಬಾರಿಯ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಿದೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 283 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 46 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 316 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 111 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ