ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು: ಹರೀಶ್ ಪೂಂಜಾ

ಬೆಳ್ತಂಗಡಿ, ಆ. 6: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco Sensitive Area) ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಪ್ರಕಟಿಸಿರುವ ಕರಡು ಅಧಿಸೂಚನೆಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆ, ಸಲಹೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸಬೇಕು ಎಂದು ಶಾಸಕ ಹರೀಶ್ ಪೂಂಜ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2026ರ ಜುಲೈ 27ರಂದು ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಸಂಬಂಧ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯಿಂದ ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಭೂಮಿ, ಕೃಷಿ, ಮನೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸ್ಥಳೀಯರ ಅಭಿಪ್ರಾಯ ಮತ್ತು ಆಕ್ಷೇಪಣೆಗಳು ಅತ್ಯಂತ ಮಹತ್ವದ್ದಾಗಿವೆ ಎಂದು ಅವರು ತಿಳಿಸಿದ್ದಾರೆ.

ಈ ವಿಚಾರವನ್ನು ರಾಜ್ಯ ಸರ್ಕಾರ ಕೇವಲ ಕೇಂದ್ರ ಸರ್ಕಾರದ ವಿಷಯವೆಂದು ಪರಿಗಣಿಸದೆ, ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢ ನಿಲುವು ತಾಳಬೇಕು. ರೈತರು, ಭೂಮಾಲೀಕರು ಹಾಗೂ ಗ್ರಾಮೀಣ ಜನರ ಬದುಕಿಗೆ ಧಕ್ಕೆಯಾಗುವ ಯಾವುದೇ ಅಂಶಗಳಿದ್ದರೆ ಅವುಗಳನ್ನು ಸ್ಪಷ್ಟವಾಗಿ ವಿರೋಧಿಸಿ, ಜನರ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಬಲವಾದ ಆಕ್ಷೇಪಣೆ ಸಲ್ಲಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಅವರು ಒತ್ತಾಯಿಸಿದ್ದಾರೆ.

ಸ್ಥಳೀಯರ ಹಕ್ಕುಗಳ ಪರವಾಗಿ ತಾವು ನಿರಂತರವಾಗಿ ಧ್ವನಿ ಎತ್ತುತ್ತಿದ್ದು, ಮುಂದೆಯೂ ಜನರ ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ಹರೀಶ್ ಪೂಂಜ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಪಕ್ಷಾತೀತವಾಗಿ ಜನರ ಪರವಾಗಿ ನಿಂತು, ಕರಡು ಅಧಿಸೂಚನೆಯಲ್ಲಿರುವ ಜನವಿರೋಧಿ ಅಂಶಗಳನ್ನು ಕೈಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ಹೇರಬೇಕು ಎಂದಿದ್ದಾರೆ.

ಕರಡು ಅಧಿಸೂಚನೆ ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಜುಲೈ 27ರಿಂದ 60 ದಿನಗಳೊಳಗೆ ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.

ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ:

ಕಾರ್ಯದರ್ಶಿಗಳು,ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ,ಇಂದಿರಾ ಪರಿಸರ ಭವನ, ಜೋರ್‌ಬಾಗ್, ನವದೆಹಲಿ – 110003. ಇ-ಮೇಲ್: esz-mef@nic.in

ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಭೂಮಿ, ಬದುಕು ಮತ್ತು ಹಕ್ಕುಗಳ ರಕ್ಷಣೆಗೆ ತಾವು ಸದಾ ಬದ್ಧರಾಗಿದ್ದು, ರಾಜ್ಯ ಸರ್ಕಾರವೂ ಜನರ ಪರವಾಗಿ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ಹೇರಬೇಕು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ