ಬೆಳ್ತಂಗಡಿ: ಪೊಲೀಸ್ ಇಲಾಖೆಯ ವತಿಯಿಂದ ಅದ್ದೂರಿಯ ಕುಟುಂಬ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಬೆಳ್ತಂಗಡಿ ವೃತ್ತ ವ್ಯಾಪ್ತಿಯಲ್ಲಿ ಬರುವ 5 ಠಾಣಾ ಸಿಬ್ಬಂದಿಗಳೊಂದಿಗೆ ಮತ್ತು ಕುಟುಂಬ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಿವೈಎಸ್ಪಿ ಆಗಿರುವ ವೆಲೆಂಟೈನ್ ಡಿಸೋಜ ಶುಭ ಹಾರೈಸಿದರು.

ಬೆಳ್ತಂಗಡಿ ಪೊಲೀಸ್ ಠಾಣಾ ಆವರಣದಲ್ಲಿ ಪುರುಷರಿಗೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪ್ರತ್ಯೇಕ ಆಟೋಟ ಸ್ಪರ್ಧೆಗಳದ ವಾಲಿಬಾಲ್ ಹಗ್ಗಜಗ್ಗಾಟ ತ್ರೋಬಾಲ್ ಮತ್ತು ಸಂಗೀತ ಕುರ್ಚಿ ಏರ್ಪಡಿಸಿ ರಾತ್ರಿ ವಿವಿಧ ರಸಮಂಜರಿ ಕಾರ್ಯಕ್ರಮ ಹಾಗೂ ಕಿರು ನಾಟಕ ಪ್ರದರ್ಶನ ನಡೆಯಿತು.

READ ALSO

ಬೆಳ್ತಂಗಡಿ ವೃತ್ತ ವ್ಯಾಪ್ತಿಯಲ್ಲಿ ಬರುವ ವೇಣೂರು, ಪುಂಜಾಲಕಟ್ಟೆ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಬೆಳ್ತಂಗಡಿ ಸಂಚಾರಿ ಠಾಣೆ, ಗೃಹರಕ್ಷಕ ದಳ ಸೇರಿ ಒಟ್ಟು ಆರು ತಂಡಗಳು ಭಾಗವಹಿಸಿದ್ದವು.
ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿರುವ ಸಂದೇಶ್ ಪಿಜಿ ಇವರ ಮುಂದಾಳತ್ವದಲ್ಲಿ‌ ನಡೆದ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಯಿತು.