ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ.

ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ ಈ ವರ್ಷದ ಮೊದಲ ಮಳೆಯಾಗಿತ್ತು. ಬಳಿಕ ಫೆಬ್ರವರಿ 24ರಂದು ಮತ್ತೆ ಹಲವೆಡೆ ಮಳೆಯಾಗಿದ್ದು, ಇದೀಗ ಶನಿವಾರ ಮೂರನೇ ಬಾರಿ ಮಳೆ ಸುರಿದಿದೆ.

ಈ ನಡುವೆ ನಿಡ್ಲೆ ಕಳೆಂಜ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಖಾಸಗಿ ವಿದ್ಯುತ್ ಲೈನ್ ಟವರ್ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಲೈನ್‌ಗೆ ಹಾನಿಯಾಗಿದ್ದು, ಕೆಲ ಸಮಯ ಸಂಚಾರಕ್ಕೂ ಅಡಚಣೆ ಉಂಟಾಯಿತು. ಸ್ಥಳೀಯರೊಂದಿಗೆ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ತಕ್ಷಣ ಸ್ಥಳಕ್ಕೆ ಆಗಮಿಸಿ ಮರವನ್ನು ತೆರವುಗೊಳಿಸಲು ಸಹಕರಿಸಿದರು. ಬಳಿಕ ರಸ್ತೆ ಸಂಚಾರವನ್ನು ಸಾಮಾನ್ಯಗೊಳಿಸಲಾಯಿತು.ಕಳೆದ ವರ್ಷ ಮಾರ್ಚ್ 12ರಂದು ತಾಲೂಕಿನಲ್ಲಿ ಆಲಿಕಲ್ಲು ಹಾಗೂ ಭಾರಿ ಗಾಳಿ ಸಹಿತ ಮೊದಲ ಮಳೆಯಾಗಿತ್ತು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ