
ಬೆಳ್ತಂಗಡಿ: ಇತ್ತೀಚೆಗೆ ಬೆಳ್ತತಂಗಡಿಯ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ವಿಚಾರವಾಗಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬೆಳ್ತಂಗಡಿಯಲ್ಲಿ ಪ್ರತಿಭಟನೆ ಠಾಣೆಗೆ ನಡೆಸುತ್ತಿದ್ದಾರೆ. ಠಾಣೆಗೆ ಮುತ್ತಿಗೆ ಹಾಕುವ ವಿಚಾರವನ್ನು ಮೊದಲೇ ಅರಿತಿದ್ದ ಪೊಲೀಸ್ ಇಲಾಖೆ ಸಕಲ ಬಂದೋಬಸ್ತ್ ಏರ್ಪಡಿಸಿದೆ.

ಈ ವೇಳೆ ಎಸ್.ಡಿ.ಪಿ.ಐ. ತಾಲೂಕು ಅಧ್ಯಕ್ಷ ಮಾತನಾಡುತ್ತಾ , ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸದೇ ಅಮಾಯಕರನ್ನು ಬಂಧಿಸಲಾಗಿದೆ. ರಾಜಕೀಯಕ್ಕೆ ಒತ್ತಡ ಬಳಸಿ ಎಸ್.ಡಿ.ಪಿ.ಐ. ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.
ಎಸ್.ಡಿ.ಪಿ.ಐ. ರಾಷ್ಟ್ರೀಯ ಕಾರ್ಯದರ್ಶಿ ಮಾತನಾಡಿ, ಸಂವಿಧಾನಕ್ಕೆ ನಾವು ಗೌರವ ನೀಡುವವರು. ಸಂವಿಧಾನ ಬದ್ಧವಾಗಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಎಸ್.ಡಿ.ಪಿ.ಐ. ಪಕ್ಷದ ಪರ ಘೋಷಣೆ ಕೂಗಿದ್ದಾರೆ. ಆದರೆ ವಿಡಿಯೋದಲ್ಲಿ ತಿರುಚಲಾಗಿದೆ. ಈ ಬಗ್ಗೆ ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.
ನೂರಕ್ಕೂ ಅಧಿಕ sdpi ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಬೆಳ್ತಂಗಡಿ ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.