TRENDING
Next
Prev

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಕಾನರ್ಪ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಬೆಳ್ತಂಗಡಿ ತಾಲೂಕಿನ ಜಯರಾಜ್ ಸಾಲಿಯಾನ್ ಕಾನರ್ಪ ರವರು ಆಯ್ಕೆಯಾಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಭಾರತೀಯ ಮಜ್ದೂರ್ ಸಂಘದಲ್ಲಿ ಗುರುತಿಸಿಕೊಂಡಿರುವ ಇವರು ಸಕ್ರೀಯವಾಗಿ ಕಾರ್ಮಿಕ ವರ್ಗದ ಜನತೆಗೆ ಸೌಲಭ್ಯ ಒದಗಿಸಿಕೊಡುವ ಜೊತೆಗೆ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಇವರನ್ನು ಮಜ್ದೂರ್ ಸಂಘವು ಗುರುತಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷ ಹುದ್ದೆಯನ್ನು ನೀಡಿರುತ್ತಾರೆ. ಈ ಹಿಂದೆಯೂ ಹಲವಾರು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಇವರು ಜನಸಾಮಾನ್ಯರ, ಬಡಜನರ ಹಾಗೂ ಅಸಂಘಟಿತ ಕಾರ್ಮಿಕರ ಧ್ವನಿಯಾಗಿದ್ದಾರೆ

READ ALSO