ಇಂದಿನಿಂದ ಪೂರ್ಣ ಪ್ರಮಾಣದಲ್ಲಿ Ksrtc-Bmtc ಸಂಚಾರ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇಳಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಕೆಎಸ್‌ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಇರಲಿವೆ.

ಇಂದಿನಿಂದ ಕೆಎಸ್‌ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಇರಲಿದ್ದು, ಮೆಟ್ರೋ ಕೂಡ ಕಾರ್ಯಾಚರಿಸಲಿದೆ. ಅಂಗಡಿ ಮುಂಗಟ್ಟುಗಳು ಬೆಳಗ್ಗೆಯಿಂದ ರಾತ್ರಿ 9 ಗಂಟೆಯವರೆಗೆ ತೆರೆಯಲು ಅವಕಾಶವಿದೆ. ಮಾಲ್, ಹೋಟೆಲ್, ಬಾರ್ ಗಳೂ ಓಪನ್ ಆಗಿರುತ್ತವೆ. ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ.

READ ALSO

ಮದುವೆ, ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಅವಕಾಶ ನೀಡಲಾಗಿದೆ. ಆದರೆ ಸಾರ್ವಜನಿಕರು ಯಾವ ಕಾರಣಕ್ಕೂ ಕೋವಿಡ್ ಮಾರ್ಗಸೂಚಿಗಳನ್ನು ಮೀರದಂತೆ ಸರ್ಕಾರ ಮನವಿ ಮಾಡಿದೆ.