ಪ್ರಯಾಣಿಕರಿಗೆ ಬಿಗ್ ಶಾಕ್ : BMTC ಬಸ್‌ ʼಪ್ರಯಾಣ ದರ ಏರಿಕೆʼ ಸಾಧ್ಯತೆ..!

ಬೆಂಗಳೂರು: ದಿನನಿತ್ಯದ ವಸ್ತುಗಳ ದರ ಏರಿಕೆಯಿಂದ ಕಂಗಾಲಾದ ಸಾರ್ವಜನಿಕರ ಮೇಲೆ ರಾಜ್ಯ ಸರ್ಕಾರ ಮತ್ತೊಂದು ಬರೆ ಎಳೆಯಲು ಸಿದ್ದತೆ ನಡೆಸಿದೆ. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಿಎಂಟಿಸಿ ಬಸ್‌ ಪ್ರಯಾಣ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ.

ಹೌದು, ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಬಿಎಂಟಿಸಿ ಪ್ರಸ್ತಾವನೆ ಸಲ್ಲಿಸಿದ್ದು, ಬೆಲೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಇನ್ನು ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರಸ್ತಾವನೆ ಸಲ್ಲಿಸಿದ್ದೇವೆ. ಮುಖ್ಯಮಂತ್ರಿಯವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವ್ರ ನಿರ್ಣಾಯವೇ ಅಂತಿಮ’ ಎಂದಿದ್ದಾರೆ.

READ ALSO

ಸುದ್ದಿಗೋಷ್ಠಿಯಲ್ಲಿ ಮಾತು ಮುಂದುವರೆಸಿದ ಸಚಿವರು, ‘ಬಿಎಂಟಿಸಿ ಶೇ 18 ರಿಂದ ಶೇ 20 ರಷ್ಟು ಏರಿಕೆ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿದೆ. ಆ ಪ್ರಮಾಣದಲ್ಲಿ ಮಾಡಿ ಪ್ರಯಾಣಿಕರ ಮೇಲೆ ಹೊರೆ ಹಾಕುವುದಿಲ್ಲ. ಅಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲು ಉದ್ದೇಶಿಸಲಾಗಿದೆ. ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದರೆ ಅಧಿವೇಶನದ ಸಂದರ್ಭದಲ್ಲಿ ಏರಿಕೆ ಮಾಡಲಾಗುವುದು’ ಎಂದರು