ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಕಾಟ: 14 ಮಂದಿಗೆ ಬ್ಲ್ಯಾಕ್ ಫಂಗಸ್ – ಇಬ್ಬರು ಬಲಿ

ಬೆಂಗಳೂರು : ಒಂದು ಕಡೆ ಕೊರೊನಾ ಕಾಟ ಹೆಚ್ಚಿದ್ದರೆ ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗಿದೆ. ನಗರದಲ್ಲಿ ಒಟ್ಟು 14 ಮಂದಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.14 ಮಂದಿಯಲ್ಲಿ 7 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ, 7 ಮಂದಿ ಇಎನ್‍ಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ ಇಬ್ಬರು ಬ್ಲ್ಯಾಕ್ ಫಂಗಸ್‍ಗೆ ಮೃತಪಟ್ಟಿದ್ದಾರೆ.

ಲಿವರ್, ಆಕ್ಸಿಜನ್, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದವರಲ್ಲೂ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. 14 ಜನ ಕೂಡ ಬೆಂಗಳೂರಿನವರಾಗಿದ್ದಾರೆ. ಕೋವಿಡ್‍ನಿಂದ ಬಳಲುತ್ತಿದ್ದು, ಡಯಾಬಿಟಿಸ್ ಹೆಚ್ಚು ಇದ್ದವರಿಗೆ ಬ್ಲ್ಯಾಕ್ ಫಂಗಸ್ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲೂ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಹಿಡಕಲ್ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ.

READ ALSO