ಕಚ್ಚಾ ಬಾಂಬ್ ಸ್ಪೋಟ, 9 ಮಂದಿಗೆ ಗಾಯ, ಒರ್ವನ ಸ್ಥಿತಿ ಗಂಭೀರ!

ಶಿವಮೊಗ್ಗ  : ಹಂದಿ ಹೊಡೆಯಲು ಸಂಗ್ರಹಿಸಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ, 9 ಮಂದಿ ತೀವ್ರವಾಗಿ ಗಾಯಗೊಂಡಿದ್ದರೇ, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಸಮೀಪದ ಕುಂಚೇನಹಳ್ಳಿಯಲ್ಲಿ ನಡೆದಿದೆ.

ಕುಂಚೇನಹಳ್ಳಿಯ ಸಮೀಪದಲ್ಲಿ ಕಾಡು ಹಂದಿ ಭೇಟೆಯಾಡಲು ಬಳಸುವ ನಾಡಬಾಂಬ್ ತಯಾರಿಸಿ ಬಿಸಿಲಿಗೆ ಒಣಗಿಸಲು ಹಾಕಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸ್ಪೋಟಗೊಂಡಿದ್ದು ಈ ಸಮಯದಲ್ಲಿ ಸ್ಥಳದಲ್ಲಿದ್ದ 9 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ವ್ಯಕ್ತಿಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.

READ ALSO

ಗಾಯಗೊಂಡಿರುವ ವ್ಯಕ್ತಿಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.