ಬೆಂಗಳೂರು : ತಮಿಳುನಾಡಿಗೆ ಇಂದು ಬುರೇವಿ ಚಂಡಮಾರುತ ಅಪ್ಪಳಿಸಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಇಂದು ತಮಿಳುನಾಡಿನ ಕನ್ಯಾಕುಮಾರಿಗೆ ಬುರೇವಿ ಚಂಡಮಾರುತ ಅಪ್ಪಳಿಸಲಿದೆ. ಹೀಗಾಗಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿಸೆಂಬರ್ 6 ರವರೆಗೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ