ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ.

ಬುಧವಾರ ಸಂಜೆ ನಗರದಾದ್ಯಂತ ಗಾಳಿ ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆಯ ಪಕ್ಕದಲ್ಲಿದ್ದ ಟಾರ್ಪಾಲಿನ್ ಶೆಡ್‌ ಅಡಿಯಲ್ಲಿ ಸಾರ್ವಜನಿಕರು ಹಾಗೂ ಬೀದಿ ಬದಿ ವ್ಯಾಪಾರಿಗಳು ಆಶ್ರಯ ಪಡೆದಿದ್ದರು. ಮಳೆಯ ತೀವ್ರತೆಗೆ ಹಳೆಯದಾಗಿದ್ದ ಆಸ್ಪತ್ರೆಯ ಕಾಂಪೌಂಡ್ ದಿಢೀರನೆ ಕುಸಿದು ಬಿದ್ದಿದೆ ಪರಿಣಾಮ ಅಲ್ಲಿ ನಿಂತಿದ್ದವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಈ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದು ಇನ್ನೂ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಅವರ ರಕ್ಷಣೆಗಾಗಿ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೇವಲ ಶಿವಾಜಿನಗರ ಮಾತ್ರವಲ್ಲದೆ, ಮೆಜೆಸ್ಟಿಕ್, ಕೆ.ಆ‌ರ್. ಮಾರುಕಟ್ಟೆ, ಕಾರ್ಪೊರೇಷನ್, ಶಾಂತಿನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ

ದುರಂತ ಘಟನೆ ನಡೆದ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದಾರೆ. ದುರಂತ ಹೇಗಾಯ್ತು, ಯಾರೆಲ್ಲಾ ಇದ್ದರು ಎಂದು ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ. ಮುಂಜಾಗ್ರತ ಕ್ರಮ ಕೈಗೊಳ್ಳದ ಜಿಬಿಎ ಅಧಿಕಾರಗಳ ಮೇಲೆ ಗರಂ ಆಗಿ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ

ಇನ್ನು ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವಘಡ ಸಂಭವಿಸಿದ ಮಾಹಿತಿ ಸಿಕ್ಕಿದ್ದು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕುವುದಾಗಿ ಹಾಗೆಯೇ ಗಾಯಗೊಂಡಿರುವ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ