ಕೊಡಗಿನ ಬ್ರಹ್ಮಗಿರಿ ಬೆಟ್ಟ ಕುಸಿತ, ನಾಲ್ವರು ನಾಪತ್ತೆ, ಎನ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ

ಕೊಡಗು : ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ನಾಲ್ವರು ನಾಪತ್ತೆಯಾಗಿದ್ದಾರೆಂದು ಹೇಳಲಾಗಿದೆ.

ಇನ್ನು ಸ್ಥಳಕ್ಕೆ ಎನ್ ಡಿ ಆರ್ ಎಫ್ ತಂಡ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮಣ್ಣಿನ ಅಡಿಯಲ್ಲಿ ಸಿಲುಕಿರುವರನ್ನು ರಕ್ಷಣೆ ಮಾಡೋದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಇನ್ನು ಈ ಹಿಂದೆ ಕೊಡಗಿನಲ್ಲಿ ಉಂಟಾದ ಪ್ರವಾಹ ಯಾವ ರೀತಿ ಅನಾಹುತಕ್ಕೆ ಕಾರಣವಾಯ್ತು ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ಅದೇ ರೀತಿಯ ಅನಾಹುತಗಳು ಸಂಭವಿಸಿರೋದು ಜಿಲ್ಲೆಯ ಜನರ ಆತಂಕ ಹೆಚ್ಚಿಸಿದೆ. ಅಲ್ಲದೇ ಅಪಾಯಕಾರಿ ಸ್ಥಳಗಳಲ್ಲಿ ಇರುವವರನ್ನು ಈಗಾಗಲೇ ಜಿಲ್ಲಾಡಳಿತ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.

READ ALSO