ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಲಾಕ್ಡೌನ್ ವಿಸ್ತರಣೆ ಬಹುದೊಡ್ಡ ಚರ್ಚಾ ವಿಷಯವಾಗಿ ಬದಲಾಗಿದೆ. ಮೇ 10ರಿಂದ 24ರವರೆಗೆ ಲಾಕ್ಡೌನ್ ಆದೇಶವನ್ನ ಸರ್ಕಾರ ಜಾರಿ ಮಾಡಿದ ಬಳಿಕ ಸೋಂಕಿನ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಈ ಫಲಿತಾಂಶವನ್ನ ಆಧರಿಸಿ ವಿಪಕ್ಷಗಳು ಲಾಕ್ಡೌನ್ ಮುಂದುವರಿಸುವಂತೆ ರಾಜ್ಯ ಸರ್ಕಾರಕ್ಕೆ ಮೇಲಿಂದ ಮೇಲೆ ಬೇಡಿಕೆಗಳನ್ನ ಇಡುತ್ತಿದೆ.
ಈ ನಡುವೆ ರಾಜ್ಯದ ವಿವಿಧ ಸಚಿವರೂ ಸಹ ಲಾಕ್ಡೌನ್ ವಿಸ್ತರಣೆಯತ್ತ ಒಲವು ತೋರಿದ್ದಾರೆ. ಹೀಗಾಗಿ ಲಾಕ್ಡೌನ್ ಭವಿಷ್ಯ ಏನಾಗಲಿದೆ ಎಂಬ ಪ್ರಶ್ನೆ ಅನೇಕರಲ್ಲಿದೆ. ಈ ಎಲ್ಲದರ ನಡುವೆ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ. ನಾಳೆಯ ಸುದ್ದಿಗೋಷ್ಠಿಯಲ್ಲೇ ಲಾಕ್ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ.