ತುಮಕೂರು: ತುಮಕೂರು ಜಿಲ್ಲೆಯ ಪ್ರಮುಖ ಪಟ್ಟಣವಾದ ಕಲ್ಪತರು ನಾಡು ತಿಪಟೂರಿಗೆ 20/03/2021 ಶನಿವಾರದಂದು ರಾಜ್ಯದ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರು ಬೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಕೆರೆಗೋಡಿ ರಂಗಾಪುರ ಸುಕ್ಷೇತ್ರಕ್ಕೆ ಬೇಟಿ ನೀಡಿ ನೂತನವಾಗಿ ನಿರ್ಮಾಣಗೊಂಡ ಅತಿಥಿ ಗೃಹಗಳ ಸಮುಚ್ಚಯ ಉದ್ಘಾಟನಾ ಕಾರ್ಯಕ್ರಮ ಹಾಗೂ ತಿಪಟೂರು ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಾಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಿನಿ ವಿಧಾನಸೌಧ ಕಛೇರಿ, ನಗರ ಸಭಾ ಕಟ್ಟಡ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.