ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

ಪುತ್ತೂರು, ಜು.15: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರತಿಷ್ಠಿತ ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಜುಲೈ 18ರಂದು ಪುತ್ತೂರಿನ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ “ಆಧುನಿಕ ಮಾಧ್ಯಮ ಕ್ಷೇತ್ರದಲ್ಲಿ ಎ.ಐ. ತಂತ್ರಜ್ಞಾನ” ವಿಷಯದ ಕುರಿತು ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಜಯ್ ಶಾಸ್ತಿ ಸಿ.ಜಿ. ಉಪನ್ಯಾಸ ನೀಡಲಿದ್ದಾರೆ.

ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಿಕಾ ವಿತರಕ ಇಬ್ರಾಹಿಂ ನೆಕ್ಕಿಲಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ, ತಾಲೂಕು ಪತ್ರಕರ್ತರ ಸಂಘದ ವಿಶೇಷ ಸಾಧಕ ಪತ್ರಕರ್ತರು ಹಾಗೂ ಶೈಕ್ಷಣಿಕ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳನ್ನೂ ಗೌರವಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಹಾಗೂ ಕಾರ್ಯದರ್ಶಿ ಸಿದ್ದಿಕ್ ನೀರಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರ ಪತ್ರಿಕಾ ಕ್ಷೇತ್ರದ ಸುದೀರ್ಘ ಸೇವೆಯನ್ನು ಸ್ಮರಿಸಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ಪುತ್ತೂರು ಉಪವಿಭಾಗದ ಸುಳ್ಯ, ಕಡಬ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಅತ್ಯುತ್ತಮ ಪತ್ರಿಕಾ ವರದಿಗೆ ವಾರ್ಷಿಕವಾಗಿ ಈ ಪ್ರಶಸ್ತಿ ನೀಡಲಾಗುತ್ತದೆ.

ಪ್ರಥಮ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿರುವ ಅರವಿಂದ ಹೆಬ್ಬಾರ್ ಮುಂಡಾಜೆ ಅವರು ಈ ಹಿಂದೆ ಸುದ್ದಿ ಬಿಡುಗಡೆ ಹಾಗೂ ಉದಯವಾಣಿ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದು, ಕಳೆದ ಏಳು ವರ್ಷಗಳಿಂದ ವಿಜಯ ಕರ್ನಾಟಕ ಪತ್ರಿಕೆಯ ಬೆಳ್ತಂಗಡಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Spread the love
  • Related Posts

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 4 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 5 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 10 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 11 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 14 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!