ಮಂಗಳೂರು : ಪುತ್ತೂರಿನಿಂದ ಸುಳ್ಯ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಹೋಗುತ್ತಿದ್ದಂತ ಮದುವೆ ದಿಬ್ಬಣದ ಬಸ್ಸೊಂದು, ಕೇರಳದ ಪಾನತ್ತೂರು ಬಳಿ ಪಲ್ಟಿಯಾಗಿದೆ. ಇದರಿಂದಾಗಿ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಕೊಡಗಿನ ಕರಿಕೆಯಲ್ಲಿ ಇದ್ದಂತ ಮದುವೆ ಕಾರ್ಯಕ್ರಮಕ್ಕೆ ಕಲ್ಲಪ್ಪಳ್ಳಿ ಪಾನತ್ತೂರು ಮೂಲಕ ಈ ಬಸ್ ತೆರಳುತ್ತಿತ್ತು ಎಂದು ಸದ್ಯಕ್ಕೆ ತಿಳಿದು ಬಂದಿದೆ. ಇಂತಹ ಬಸ್ ಕೇರಳದ ಪಾನತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿ ಮನೆಯೊಂದರ ಮೇಲೆ ಪಲ್ಟಿಯಾಗಿ ಬಿದ್ದದ್ದರಿಂದ ಒಂದು ಮಗು ಸೇರಿದಂತೆ ಐವರು ಮೃತಪಟ್ಟಿದ್ದು, ಮೃತರ ವಿವರ ತಿಳಿಯಬೇಕಿದೆ.
ಅಂದಹಾಗೇ ಮದುವೆ ದಿಬ್ಬಣದ ಬಸ್ ನಲ್ಲಿ 60 ಜನರು ಇದ್ದರೆಂಬುದಾಗಿ ತಿಳಿದಿದ್ದು, ಇವರಲ್ಲಿ 30ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಇದರಿಂದಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಈ ದುರಂತದಲ್ಲಿ ಗಾಯಗೊಂಡವರನ್ನು ಕಾಂಞಂಗಾಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಮತ್ತಷ್ಟು ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.
ಇದರಿಂದಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಈ ದುರಂತದಲ್ಲಿ ಗಾಯಗೊಂಡವರನ್ನು ಕಾಂಞಂಗಾಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಮತ್ತಷ್ಟು ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.