ಬೆಳಗಾವಿ : ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ನಡೆದಿದೆ.
ಬೆಳಗಾವಿ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಯರಹಟ್ಟಿಯಿಂದ ಬೆಳಗಾವಿ ಕಡೆಗೆ ಚಲಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಮುರಗೋಡ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿ ಒಟ್ಟು ಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಅನ್ನೋ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.