ಬೆಂಗಳೂರಿನಿಂದ ಧರ್ಮಸ್ಥಳದ ಕಡೆ ಬರುತ್ತಿದ್ದ ಬಸ್ ಪಲ್ಟಿ

ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳದ ಕಡೆ ಬರುತ್ತಿದ್ದ ಖಾಸಗೀ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ-ನಿಡ್ಲೆ ರಸ್ತೆ ಮದ್ಯೆಯಲ್ಲಿ ನಡೆದಿದೆ.

ನಾಳೆ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದ್ದು ವಧು ವರ ಬೇರೆ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾದ ಮಾಹಿತಿ ಲಭ್ಯವಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

READ ALSO