ರಾಜ್ಯಾದ್ಯಂತ ಇಂದಿನಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

ಶಕ್ತಿ ಯೋಜನೆಯ ಲೋಗೋ, ಸ್ಟಿಕರ್ ಹಾಗೂ ಸ್ಮಾರ್ಟ್​ ಕಾರ್ಡ್​ ಮಾದರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಈ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್​ ನೀಡಲಾಯಿತು. ಇನ್ನು ಇಂದಿನಿಂದ ಸರ್ಕಾರಿ ಸಾರಿಗೆ ಹಾಗೂ ಬಿಎಂಟಿಸಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ರಾಜ್ಯದ ಮೂಲೆ-ಮೂಲೆಗಳಲ್ಲಿ ಪ್ರಯಾಣಿಸಬಹುದು. ಆದರೆ ಯಾವುದಾದರು ಗುರುತಿನ ಚೀಟಿ ಇರಲೇ ಬೇಕು.ಫ್ರೀ ಬಸ್ ಪಾಸ್​ಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಇದಕ್ಕೆ ಮೂರು ತಿಂಗಳು ಸಮಯ ನೀಡಲಾಗಿದೆ.

READ ALSO