ಗುಂಡ್ಯ: ವಿಪರೀತ ಗಾಳಿ ಮಳೆಯಿಂದಾಗಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮೇಲೆ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ನಡೆದಿದೆ.
ಸುಬ್ರಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದ್ದು ಪ್ರಯಾಣಿಕರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇನ್ನು ಮರ ಬಿದ್ದಿದ್ದರಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು.