ಸುಬ್ರಹ್ಮಣ್ಯ: ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ರವರು ಇಂದು ನವೆಂಬರ್ 02 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವರಾದ ಎಸ್. ಅಂಗಾರ,ಸುಳ್ಯ ಮಂಡಲಾಧ್ಯಕ್ಷರಾದ ವೆಂಕಟ್ ವಳಲoಬೆ, ಜಿಲ್ಲಾ ಪ್ರಕೋಷ್ಠ ಸಂಚಾಲಕರಾದ ಪ್ರಸನ್ನ ದರ್ಬೆ,ಮತ್ತಿತರ ಪಕ್ಷದ ಮುಖಂಡರು,ಪದಾಧಿಕಾರಿಗಳು ಉಪಸ್ಥಿತರಿದ್ದರು.





