ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ.
ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವುದಾಗಿ ತಿಳಿದುಬಂದಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಾಳುಗಳ ಕುರಿತು ಸದ್ಯಕ್ಕೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.





