ಬಾಗಲಕೋಟೆ: ರಾಜ್ಯದ ಉಪಮುಖ್ಯಮಂತ್ರಿಯೊಬ್ಬರ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ ಮಗ ಚಿದಾನಂದ ಸವದಿ ಸೇರಿದಂತೆ 12 ಜನರು ಎರಡು ಕಾರಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಹುನಗುಂದ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎನ್ನಲಾಗಿದೆ.
ಅಪಘಾತದ ನಂತರ ತಮ್ಮ ವಾಹನದ ನಂಬರ್ ಜಖಂಗೊಳಿಸಿ ಲಕ್ಷ್ಮಣ ಸವದಿ ಪುತ್ರ ಮತ್ತೊಂದು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳೀಯರು ಅವರನ್ನು ಹಿಡಿದು ಕೂರಿಸಿದ್ದಾರೆ. ನಂತರ ಪೊಲೀಸರು ಆಗಮಿಸಿದ್ದಾರೆ. ಡಿಸಿಎಂ ಪುತ್ರನ ಬದಲು ಕಾರ್ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.