ಧರ್ಮಸ್ಥಳದ ಎತ್ತಿನ ಗಾಡಿ ಕಾರಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್! ಮಹೀಂದ್ರಾ ಗ್ರೂಪ್‌ ಮುಖ್ಯಸ್ಥ ಆನಂದ್‌ ಮಹೀಂದ್ರಾರಿಗೂ ಅಚ್ಚರಿ ಮೂಡಿಸಿದ ಕಾರಿನ ವಿನ್ಯಾಸ!

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಳೆಯ ಅಂಬಾಸಿಡರ್‌ ಕಾರಿನ ಹಿಂಭಾಗವನ್ನು ಬಳಸಿ ವಿಶೇಷವಾಗಿ ವಿನ್ಯಾಸಗೊಳಿಸಿದ ಎತ್ತಿನ ಗಾಡಿ ಕಾರಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ.

ಸದಾ ಒಂದಿಲ್ಲೊಂದು ಕುತೂಹಲಕರ ಸಂಗತಿಗಳನ್ನು ಟ್ವೀಟ್‌ ಮಾಡುವ ಮಹೀಂದ್ರಾ ಗ್ರೂಪ್‌ ಮುಖ್ಯಸ್ಥ ಆನಂದ್‌ ಮಹೀಂದ್ರಾ ಅವರು ಇದೀಗ ಧರ್ಮಸ್ಥಳದ ಎತ್ತಿನ ಬಂಡಿ ಕಾರಿನ ವಿಡಿಯೋವನ್ನು ಟ್ವೀಟ್‌ ಮಾಡಿ ಕುತೂಹಲ ಕೆರಳಿಸಿದ್ದಾರೆ.

ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಎತ್ತಿನ ಗಾಡಿ ಕಾರಿನ ವಿಡಿಯೋವೊಂದನ್ನು ಟ್ವೀಟ್‌ ಮಾಡಿರುವ ಆನಂದ್‌ ಮಹೀಂದ್ರಾ, ವಿಶ್ವದ ಅತಿ ದೊಡ್ಡ ಎಲೆಕ್ಟ್ರಿಕ್‌ ಕಾರು ತಯಾರಿಕಾ ಸಂಸ್ಥೆ ಟೆಸ್ಲಾ ಹಾಗೂ ಎಲೋನ್‌ ಮಾಸ್ಕ್‌ಗೆ ಕೂಡ ಇದಕ್ಕಿಂತ ಕಡಿಮೆ ವೆಚ್ಚದಲ್ಲಿ ನವೀಕರಿಸಬಹುದಾದ ಇಂಧನದ ಕಾರನ್ನು ತಯಾರಿಸಲು ಸಾಧ್ಯವಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಸವಾಲು ಹಾಕಿದ್ದರು.

ಈ ವಿಡಿಯೋಗೆ 31 ಸಾವಿರಕ್ಕೂ ಹೆಚ್ಚು ಲೈಕ್‌ ಬಂದಿದ್ದು, 4800ಕ್ಕೂ ಅಧಿಕ ರೀಟ್ವೀಟ್‌ ಮಾಡಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಪರಿಕಲ್ಪನೆಯಲ್ಲಿ ಮೂಡಿದ ಬಂದ ಎತ್ತಿನ ಗಾಡಿ ಕಾರು ಇದಾಗಿದೆ. ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಳೆಯ ಅಂಬಾಸಿಡರ್‌ ಕಾರಿನ ಹಿಂಭಾಗವನ್ನು ಬಳಸಿಕೊಂಡು ಎರಡು ಎತ್ತುಗಳ ಮೂಲಕ ಎಳೆಯಬಹುದಾದ ಎತ್ತಿನ ಗಾಡಿ ಕಾರನ್ನು ತಯಾರಿಸಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ