ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ, ಹಿಜಾಬ್ ವಿವಾದಕ್ಕೆ ಮಹತ್ತರದ ತೀರ್ಪು ನೀಡಿದ ಹೈಕೋರ್ಟ್!
ಬೆಂಗಳೂರು: ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿದ ಹಿಜಾಬ್ ಪ್ರಕರಣಕ್ಕೆ ಇಂದು ಮಹತ್ತರದ ತೀರ್ಪು ಪ್ರಕಟ ವಾಗಿದೆ. ಪ್ರತಿಭಟನೆಗಳು, ಆರೋಪ, ಪ್ರತ್ಯಾರೋಪಗಳು ಮತ್ತು ಒಂದರ ಹಿಂದೊಂದು ವಿಚಾರಣೆಗಳ ನಂತರ, ಕರ್ನಾಟಕ ಹೈಕೋರ್ಟ್ ಇಂದು ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಿದೆ. ಹಿಜಾಬ್ ಧರಿಸಿವುದು ಇಸ್ಲಾಂ…
ಮಕ್ಕಳಿಲ್ಲದ ದಂಪತಿಗಳಿಗೆ ಸಂತಾನ ಭಾಗ್ಯ ಒದಗಿಸುವ ಚುಚ್ಚು ಮದ್ದು ನೀಡಿ ವಂಚಿಸಿದ ನಕಲಿ ವೈದ್ಯ ಜೋಡಿಯ ಬಂಧನ!
ತುಮಕೂರು: ಮಕ್ಕಳಿಲ್ಲದ ದಂಪತಿಗಳನ್ನು ಗುರಿಯಾಗಿಸಿಕೊಂಡು ಮಕ್ಕಳಾಗುವುದಾಗಿ ಭರವಸೆ ನೀಡಿ ವಂಚಿಸುತ್ತಿದ್ದ ದಂಪತಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ದಂಪತಿಯಿಂದ ದಾರಿತಪ್ಪಿದವರು ಹಣ ಕಳೆದುಕೊಂಡಿದ್ದಾರೆ. ಕೆಲವರು ಆರೋಗ್ಯವನ್ನೂ ಕಳೆದುಕೊಂಡು ಚೇತರಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ವೈದ್ಯ ದಂಪತಿ ಎಂದು ಹೇಳಿಕೊಂಡಿದ್ದ ದಂಪತಿಯನ್ನು ತುಮಕೂರು ಜಿಲ್ಲೆಯ ನೊಣವಿನಕೆರೆ…
ವಿಶೇಷ ಚೇತನರಿಗೆ ಆಶ್ರಯವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ : ಶಾಸಕರಾದ ರಮೇಶ್ ಭೂಸನೂರ
ಸಿಂದಗಿ : ಪ್ರತಿಯೊಂದು ಮನುಷ್ಯನಿಗೆ ಸಮಾಜದಲ್ಲಿ ಸ್ವತಂತ್ರವಾಗಿ ಬದುಕಲು ಹಕ್ಕಿದೆ. ಕೆಲವರಿಗೆ ಈ ಸಾಮರ್ಥ್ಯವಿದ್ದರೆ ಹಲವರು ಸಂತೋಷವನ್ನು ಹುಟ್ಟಿನಿಂದಲೇ, ಯೌವನದಲ್ಲಿ ಅಥವಾ ವೃದ್ಧಾಪ್ಯದಲ್ಲಿ ಬೇರೆ ಬೇರೆ ಕಾರಣಗಳಿಂದ ಕಳೆದುಕೊಂಡಿರುತ್ತಾರೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವಿಕಲತೆ ಸಮಸ್ಯೆಗಳು ಬಂದರೆ ಇನ್ನು ಕೆಲವರಿಗೆ ದುರದೃಷ್ಟವಶಾತ್…
ಮಂತ್ರಾಲಯ ಧರ್ಮಜಾಗೃತಿ ತಾಣ: ಡಾ| ಹೆಗ್ಗಡೆ
ಮಂತ್ರಾಲಯ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಧರ್ಮ ಜಾಗೃತಿ ತಾಣವಾಗಿದ್ದು ದೈವಶಕ್ತಿ ಹೊಂದಿದ ಪುಣ್ಯಸ್ಥಳ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ನುಡಿದರು. ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶುಕ್ರವಾರದಿಂದ ಪ್ರಾರಂಭವಾದ ಶ್ರೀ ಗುರು ವೈಭವೋತ್ಸವದ…
ಶ್ರೀ ರಾಘವೇಂದ್ರ ಗುರುವೈಭವೋತ್ಸವ ಕಾರ್ಯಕ್ರಮಕ್ಕೆ ಚಾಲನೆ, ಡಾ. ಹೆಗ್ಗಡೆ ಸಹಿತ ಹಲವು ಗಣ್ಯರು ಭಾಗಿ
ಮಂತ್ರಾಲಯ: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುರಾಯರ 401ನೇ ಪಟ್ಟಾಭಿಷೇಕ ಮಹೋತ್ಸವ ಮತ್ತು 427ನೇ ವರ್ಧಂತಿ ಉತ್ಸವಗಳ ಶ್ರೀಗುರುವೈಭವೋತ್ಸವದ ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. 04/03/2022ರಿಂದ 09/03/2022ರವರೆಗೆ ನಡೆಯುವ ಶ್ರೀ ರಾಘವೇಂದ್ರ ಗುರುವೈಭವೋತ್ಸವ ಕಾರ್ಯಕ್ರಮದ ಮೊದಲ ದಿನ ರಾಯರ ಪಟ್ಟಾಭಿಷೇಕ ಹಿನ್ನೆಲೆ ಶ್ರೀಗುರುಸಾರ್ವಭೌಮರ…
ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ
ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್…
ಮಂಗಳೂರು: ಜಿಪಿಎಲ್ ಉತ್ಸವದಲ್ಲಿ ಹೆಲಿಕಾಪ್ಟರ್ ರೈಡ್
ಮಂಗಳೂರು: ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಞಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ.ಫೆ.25ರಿಂದ 27ರವರೆಗೆ ಈ ಟೂರ್ನಿ ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತೆಲಂಗಾಣದ ಸೇರಿ…
ದೇರಾಜೆಬೆಟ್ಟ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕಕ್ಕೆ ಚಾಲನೆ, ವೈಭವದ ಹೊರೆಕಾಣಿಕೆ ಮೆರವಣಿಗೆ
ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ಮತ್ತು ನೇಮೋತ್ಸವದ ಪ್ರಥಮ ದಿನವಾದ ಶನಿವಾರ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಮರೋಡಿ ಶಾಂತಿನಗರ ಅರುಣೋದಯ ಮೈದಾನದಿಂದ…
ಮುಂಬೈ : ದಿಶಾಂತ್ ಕೃಷ್ಣ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ
ಮುಂಬೈ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಪರೀಕ್ಷೆಯಲ್ಲಿ ಸವಣಾಲು ದಿಶಾಂತ್ ಕೃಷ್ಣ ಶೆಟ್ಟಿ ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆ ಆಗಿರುತ್ತಾರೆ. ಬಾಲ್ಯದಲ್ಲಿಯೇ ಬಹುಮುಖ ಪ್ರತಿಭೆ ಆಗಿದ್ದ ದಿಶಾಂತ್ ಕೃಷ್ಣ ಶೆಟ್ಟಿ ಅವರು ಮುಂಬೈ…
ಕುಂಕುಮ, ಬಳೆ ತೆಗಿಸುವ ಪ್ರಯತ್ನ ಮಾಡಿದರೆ ಹುಷಾರ್ : ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ!
ಬೆಂಗಳೂರು: ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್‍ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಶಾಲೆ-ಕಾಲೇಜುಗಳಿಗೆ ಬಂದವರನ್ನು ತಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ…
















