ನವದೆಹಲಿ : ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು ನಡೆಸಬೇಕೇ, ಬೇಡವೇ ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ, ಈ ವರ್ಷದ 12ನೇ ತರಗತಿ ಪರೀಕ್ಷೆಯನ್ನು ನಡೆಸದೇ ಇರುವಂತ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಇಂದು ಸಂಜೆ 5.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಿಬಿಎಸ್‌ಇ ಹಾಗೂ ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ನಡೆಸುವ ಸಂಬಂಧ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಈ ಸಭೆಯಲ್ಲಿ 12ನೇ ತರಗತಿ ಪರೀಕ್ಷೆಯನ್ನು ರದ್ದು ಪಡಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.