ಹೊಸ ಕೊರೋನಾ ವೈರಸ್ ಭೀತಿ CBSE ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ : ಕಳೆದ ಇತ್ತೀಚಿಗಷ್ಟೇ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಸಿಬಿಎಸ್‌ಇಯ ಬೋರ್ಡ್ ಪರೀಕ್ಷೆಗಳಾದಂತ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುತ್ತದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಘೋಷಣೆ ಮಾಡಿದ್ದರು. ಇದರ ಮಧ್ಯೆ ಈಗ ಹೊಸ ಕೊರೋನಾ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಇಂತಹ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಮಂಗಳವಾರ ಶಿಕ್ಷಕರೊಂದಿಗೆ ನಡೆಸಿದಂತ ಸಂವಾದದಲ್ಲಿ ಸ್ಪಷ್ಟ ಪಡಿಸಿರುವಂತ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್, ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) 10 ಮತ್ತು 12ನೇ ತರಗತಿಗಳ ಪರೀಕ್ಷೆಗಳು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯಲ್ಲ. ಮುಂದಿನ ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

READ ALSO