ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ
ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ದಿನಾಂಕ ೫ ಸೆಪ್ಟೆಂಬರ್ ನಂದು ಅಂದರೆ ನಾಳೆ ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಎಂಬ ಹೆಸರಿನಡಿಯಲ್ಲಿ ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ ನಡೆದ ದಂಗೆಯು ಸಹ ಪೂರ್ವನಿಯೋಜಿತವಾಗಿದ್ದು, ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಸಾಮಾಜಿಕ ಆಸ್ತಿ ಪಾಸ್ತಿಗಳಿಗೆ ಮಾಡಿದ ಹಾನಿಯನ್ನು ನೋಡಿದರೆ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸುವ ದೃಷ್ಟಿಯಲ್ಲಿಯೇ ಈ ಹುನ್ನಾರ ನಡೆದಿದೆ ಎಂಬುವುದು ಸ್ಪಷ್ಟವಾಗುತ್ತದೆ. ಹಾಗಾಗಿ, ಸಪ್ಟಂಬರ 5, 2020 ರಂದು ಅಂದರೆ ನಾಳೆ ಆಯೋಜಿಸಲಾಗಿರುವ ಕಾರ್ಯಕ್ರಮವು ಕೇಂದ್ರ ಸರಕಾರವನ್ನು ಟೀಕಿಸುವ ಮತ್ತು ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಹಾಗೂ ಜನರನ್ನು ವಿಭಜಿಸಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದಲೇ ಮಾಡಲಾಗುತ್ತಿದೆ ಎಂಬುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಇಲ್ಲಿ ಗೌರಿ ಲಂಕೇಶರು ಸಹ ನಕ್ಸಲರ ಬೆಂಬಲಿಗರಾಗಿದ್ದು , ಅವರು ಸಾಕೇತ ರಾಜನ್ ಎಂಬ ಅಪಾಯಕಾರಿ ನಕ್ಸಲ್ ಮುಖಂಡನ ಬಗ್ಗೆ ಲೇಖನ ಸಹ ಬರೆದಿದ್ದರು. ಮಾತ್ರವಲ್ಲದೇ, ಅವರ ಕಾರ್ಯಕರ್ತರು ಸಹ ನಕ್ಸಲ್ ಚಟುವಟಿಕೆಗಳಿಗಾಗಿ ಬಂಧಿಸಲ್ಪಟ್ಟಿದ್ದಾರೆ. ಗಿರೀಶ ಕಾರ್ನಾಡರು ಸಹ ೨೦೧೮ ರಲ್ಲಿ ಇಂತಹ ಆಂದೋಲನಗಳಲ್ಲಿ ಬಹಿರಂಗವಾಗಿ ಭಾಗವಹಿಸಿ ‘ನಾನು ಸಹ ನಗರ ನಕ್ಸಲ್’ ಎಂದು ನಕ್ಸಲ್‌ವಾದವನ್ನು ಸಮರ್ಥಿಸಿ ನೀಡಿದ ಹೇಳಿಕೆಯನ್ನು ಸಹ ಇಲ್ಲಿ ಮುಖ್ಯವಾಗಿ ಉಲ್ಲೇಖಿಸಬೇಕೆನಿಸುತ್ತದೆ.

ಹಾಗಾಗಿ ಇಂತಹ ಅಭಿಯಾನಗಳು ಕಾನೂನು ಮತ್ತು ಸುವ್ಯವಸ್ಥೆಗೆ ನೇರ ಹಾಗೂ ನಿಜವಾದ ಬೆದರಿಕೆಯಾಗಿವೆ ಎಂದರೆ ತಪ್ಪಾಗಲಾರದು. ಹಾಗಾಗಿ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಇಲ್ಲದಿದ್ದರೆ ಅವರ ಮೇಲೆ ಅಗತ್ಯ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕೆಂದು ರಾಷ್ಟ್ರಾಭಿಮಾನಿಗಳು, ಸಮಾಜಹಿತವನ್ನು ಬಯಸುವ ಧರ್ಮಪ್ರೇಮಿಗಳು ರಾಜ್ಯದ ಬೆಂಗಳೂರು, ಮಂಗಳೂರು, ಉಡುಪಿ, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ಹಾಸನ, ಮೈಸೂರು, ಶಿವಮೊಗ್ಗ ಹೀಗೆ ವಿವಿಧ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರ ಸಹಭಾಗವೂ ಇತ್ತು.

ಈ ಕಾರ್ಯಕ್ರಮದ ಮೇಲೆ ಜರುಗಿಸಬೇಕಾದ ಅವಶ್ಯಕ ಕ್ರಮಗಳು:
೧. ಇಂತಹ ಕಾರ್ಯಕ್ರಮಗಳನ್ನು / ಆಂದೋಲನಗಳನ್ನು ಮಾಡಲು ಬಿಡಬಾರದು. ಇಂತಹ ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತದ್ದು ಕೊರೊನಾ ಮಹಾಮಾರಿಯ ದೃಷ್ಟಿಯಿಂದಲೂ ಅತ್ಯಂತ ಅವಶ್ಯಕವಾಗಿದೆ.
೨. ಇದು ತಮಗೆ ಸಾಧ್ಯವಿಲ್ಲದಿದ್ದಲ್ಲಿ ಇಂತಹ ಸಂಘಟನೆಗಳಿಗೆ, ಸಂಘಟನೆಗಳ ಆಯೋಜಕರಿಗೆ ಅವಶ್ಯವಿರುವ ನೋಟಿಸು, ಧೋರಣೆಗಳನ್ನು ಜಾರಿಗೊಳಿಸಬೇಕು.
೩. ಆದರೂ ಈ ಆಂದೋಲನಗಳನ್ನು ನಡೆಸುವುದಾದರೆ ದಯಮಾಡಿ ಈ ಆಂದೋಲನಗಳ ವಿಡಿಯೋ ಶೂಟಿಂಗ ಮಾಡಿಡಬೇಕು . ಇದರಿಂದ ಮುಂದೆ ಅಪರಾಧಿಗಳ ದೃಷ್ಟಿಯಿಂದ ಅವಶ್ಯಕತೆ ಬಿದ್ದಾಗ ಅದನ್ನು ಉಪಯೋಗಿಸಬಹುದು.
೪. ಈ ಪ್ರಕರಣದಲ್ಲಿ ಕಾನೂನುಬಾಹಿರ ಕೃತ್ಯಗಳಾಗಿರುವುದು ಕಂಡುಬಂದಲ್ಲಿ ಅದರಲ್ಲಿ ಭಾಗವಹಿಸಿದವರೆಲ್ಲರ ಮೇಲೆ ಅವಶ್ಯವಿರುವ ಕಾನೂನು ಕ್ರಮಗಳನ್ನು ಜರುಗಿಸಬೇಕು.
ಈ ಸಂಧರ್ಭದಲ್ಲಿ ಮದುಸೂಧನ್ ಅಯ್ಯರ,ಉಪೇಂದ್ರ ಆಚಾರ್ಯ,ಸುಧಾಕರ್,ರಾಜೇಶ್ ಮುಂತಾದವರು ಇದ್ದರು.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ