ಚೀನಾದಲ್ಲಿ 133ಜನ ಪ್ರಯಾಣಿಸುತ್ತಿದ್ದ ವಿಮಾನ ಪತನ

ಬೀಜಿಂಗ್: ದಕ್ಷಿಣ ಚೀನಾದ ಗೌಂಗೈಕಿ ಪ್ರಾಂತ್ಯದಲ್ಲಿ ಪ್ರಯಾಣಿಕರ ವಿಮಾನ ಪತನವಾಗಿದ್ದು, ವಿಮಾನದಲ್ಲಿ ಸಿಬ್ಬಂದಿ ಸೇರಿ 133 ಜನ ಪ್ರಯಾಣಿಸುತ್ತಿದ್ದರು. ಅವರೆಲ್ಲಾ ಮೃತಪಟ್ಟಿರುವ ಶಂಕೆ ಇದೆ ಎಂದು ವರದಿಯಾಗಿದೆ.

ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಪರಿಹಾರ ಕಾರ್ಯಾಚರಣೆ ತಂಡ ಸ್ಥಳಕ್ಕೆ ಧಾವಿಸಿದೆ ಎನ್ನಲಾಗಿದೆ. ಬೋಯಿಂಗ್ 737 ವಿಮಾನ ಇದಾಗಿದ್ದು, ಕುನ್‌ಮಿಂಗ್‌ನಿಂದ ಗೌಂಗುಗೆ ತೆರಳುತ್ತಿತ್ತು ಎನ್ನಲಾಗಿದೆ. ಇನ್ನಷ್ಟು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

READ ALSO