ಪಶ್ಚಿಮ ಬಂಗಾಳಭಾವೀ ಸಿಎಂ ಸುವೇಂದು ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಹತ್ಯೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಕೋಲ್ಕತ್ತಾ ಸಮೀಪದ ಮಧ್ಯಮಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು ಸುವೇಂದು ಅಧಿಕಾರಿ ಅವರ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಾಥ್ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಹೊರವಲಯದ ಮಧ್ಯಾಮಗ್ರಾಮ ಪ್ರದೇಶದಲ್ಲಿ ಈ ಘೋರ ಕೃತ್ಯ ನಡೆದಿದೆ.

2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಸುವೇಂದು ಅಧಿಕಾರಿಯವರ ಆಪ್ತ ಕಾರ್ಯದರ್ಶಿಯನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ದಾಳಿಕೋರರು ಮತ್ತು ದತ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕನಿಷ್ಠ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ಅತ್ಯಂತ ಹತ್ತಿರದಿಂದ ಚಂದ್ರ ನಾಥ್ ಅವರಿಗೆ ಗುಂಡು ತಗುಲಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ತಮ್ಮ ಅತ್ಯಾಪ್ತ ಸಹಾಯಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಸುವೇಂದು ಅಧಿಕಾರಿ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ಶೀಘ್ರದಲ್ಲೇ ಆಸ್ಪತ್ರೆಗೆ ಮತ್ತು ಘಟನಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಘಟನೆಯ ಬೆನ್ನಲ್ಲೇ ಮಧ್ಯಾಮಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ದುಷ್ಕರ್ಮಿಗಳು ಯಾರು? ಕೊಲೆಗೆ ನಿಖರ ಕಾರಣವೇನು? ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 3 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 10 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 22 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 15 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ