ಇಸ್ರೋ ಛಲಕ್ಕೆ ಐತಿಹಾಸಿಕ ಗೆಲುವು ಸತತ ಪ್ರಯತ್ನದಿಂದ ಯಶಸ್ವಿಯಾದ ಚಂದ್ರಯಾನ – 3

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ” ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು ಗೆಲ್ಲುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿದೆ. ಭಾರತದ ಧ್ವಜವನ್ನು ಚಂದ್ರನಲ್ಲಿ ಹಾರಿಸಿದೆ. ದೇಶ, ವಿದೇಶದಲ್ಲೂ ಸಂತಸ ಮನೆ ಮಾಡಿದೆ.

READ ALSO

ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ. ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ ಯಶಸ್ವಿ ಯಾಗಿದ್ದವು.

ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ. ಇಸ್ರೋ ವಿಜ್ಞಾನಿಗಳು ಚಂದ್ರಯಾನ-3 ನ್ನು ಚಂದ್ರನ ಮೇಲ್ಮೈ ಮೇಲೆ ಮೃದುವಾಗಿ ಇಳಿಸಲು ಸಾಕಷ್ಟು ಎಚ್ಚರಿಕೆಗಳನ್ನು ತೆಗೆದುಕೊಂಡಿದ್ದರು.