
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಗಮನಹರಿಸಿ ಕಾಮಗಾರಿ ಪೂರ್ಣಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.