ಚಾರ್ಮಾಡಿ ಘಾಟ್ ನಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಲಘುವಾಹನ ಸಂಚಾರಕ್ಕೆ ಗ್ರೀನ್ ಸಿಗ್ನಲ್!

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಲಘುವಾಹನ ಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ದಿನದ 24 ಗಂಟೆ ನಾಲ್ಕು ಚಕ್ರದ ವಾಹನಗಳಾದ ಟೆಂಪೋ ಟ್ರಾವೆಲ್ಲರ್, ಆಂಬ್ಯುಲೆನ್ಸ್, ಕಾರು, ಜೀಪು, ವ್ಯಾನ್,ಹಾಗೂ ಎರಡು ಚಕ್ರದ ವಾಹನಗಳು ದಿನದ 24 ಗಂಟೆ ಸಂಚರಿಸಲು ಅವಕಾಶ ನೀಡಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಬಸ್, ಆರು ಚಕ್ರದ ಲಾರಿಗಳ ಸಂಚಾರಕ್ಕೆ ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ ಮಾತ್ರ ಅನುಮತಿ ನೀಡಲಾಗಿದೆ. ಭಾರಿ ಗಾತ್ರದ 10 ಚಕ್ರದ ವಾಹನಗಳ ಸಂಚಾರಕ್ಕೆ 24 ಗಂಟೆ ವರೆಗೂ ನಿಷೇಧ ಹೇರಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.

READ ALSO