ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮದ ಮೈಕಾನ್, ಪರ್ಲಾಣಿ ಸಮೀಪದಲ್ಲಿ ರವಿವಾರ ಮುಂಜಾನೆ 7 ಗಂಟೆಗೆ ಸುಮಾರಿಗೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ತೋಟಗಳ ಮೂಲಕ ಹಾಗೂ ನದಿಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಹೊಸಮಠ ಕಡೆಗೆ ತೆರಳಿರುವ ಬಗ್ಗೆ ವರದಿಯಾಗಿದೆ.
ಯಾವುದೇ ಕೃಷಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಪದೇ ಪದೇ ಆನೆ ದಾಳಿಯಾಗುತ್ತಲೇ ಇರುವುದರಿಂದ ಈ ಪ್ರದೇಶದ ಜನರು ಭಯಭೀತಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ, ಸರ್ಕಾರ ಸೂಕ್ತ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.