ಮಲೆನಾಡಿನಲ್ಲಿ ವರುಣನ ಆರ್ಭಟ! ಚಾರ್ಮಾಡಿ ಘಾಟಿಯಲ್ಲಿ ಕುಸಿದ ಗುಡ್ಡ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ.

ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಸದ್ಯ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ವಾಹನ ಸವಾರರ ಆತಂಕ ಕೂಡ ಇಮ್ಮಡಿಗೊಂಡಿದೆ. ಕಳೆದ ಬಾರಿಯೂ ಇದೇ ಆಗಸ್ಟ್ ನಲ್ಲಿ ಸುರಿದ ಭಾರೀ ಮಳೆಗೆ ಚಾರ್ಮಾಡಿ ಘಾಟ್ ಅಲ್ಲೋಲ ಕಲ್ಲೋಲವಾಗಿತ್ತು. ಬರೋಬ್ಬರಿ ಆರು ತಿಂಗಳುಗಳ ಕಾಲ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನ ಸಂಪೂರ್ಣ ಬಂದ್ ಮಾಡಲಾಗಿತ್ತು.

ಚಾರ್ಮಾಡಿ ಘಾಟಿಯ ಹಲವೆಡೆ ಕೊಚ್ಚಿ ಹೋಗಿದ್ದ ರಸ್ತೆ ಕಾಮಗಾರಿಯನ್ನ ಇತ್ತೀಚಿಗಷ್ಟೇ ಮುಗಿಸಲಾಗಿತ್ತು. ಆದರೆ ಈಗ ಮತ್ತೆ ಮಳೆ ಜೋರಾಗಿದ್ದು, ಗುಡ್ಡ ಕುಸಿಯುತ್ತಿರುವುದರಿಂದ ರಸ್ತೆ ಸಂಪರ್ಕ ಮತ್ತೆ ಬಂದ್ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಷ್ಟೆ ಅಲ್ಲದೆ ಸಂಜೆ ಆರಂಭವಾದ ಭಾರೀ ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಈ ದೈತ್ಯ ಮಳೆ ಇನ್ನೇನು ಸೃಷ್ಟಿಸುತ್ತೋ ಎಂದು ಸ್ಥಳೀಯರು ಕೂಡ ಆತಂಕಕ್ಕೀಡಾಗಿದ್ದಾರೆ.

ಸುರಿಯುತ್ತಿರೋ ರಣ ಮಳೆ ಇಡೀ ರಾತ್ರಿ ಸುರಿಯಬಹುದೆಂದು ಸ್ಥಳೀಯರು ಊಹಿಸಿದ್ದಾರೆ. ಗುಡುಗು-ಗಾಳಿ ಇದ್ದರೆ ಮಳೆ ಕಡಿಮೆಯಾಗುತ್ತೆಂಬುದು ಗ್ರಾಮೀಣ ಜನರ ನಂಬಿಕೆ. ಆದರೆ ಮಲೆನಾಡಲ್ಲಿ ಗುಡುಗು-ಮಿಂಚು-ಗಾಳಿ ಏನೂ ಇಲ್ಲದೆ ಸುರಿಯುತ್ತಿರೋ ಮಳೆ ಇಡೀ ರಾತ್ರಿ ಬರಬಹುದೆಂದು ಸ್ಥಳೀಯರು ಭಾವಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ