ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಿನದ 24 ಗಂಟೆ ಲಘು ವಾಹನಗಳ‌ ಸಂಚಾರಕ್ಕೆ ಅನುಮತಿ

ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮಳೆಯಿಂದಾಗಿ ಸಂಚಾರಕ್ಕೆ ನಿರ್ಬಂಧ ಹೇರಿದ್ದು ಇದೀಗ ಕೊಟ್ಟಿಗೆಹಾರ -ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ದಿನದ 24 ಗಂಟೆ ಲಘು ವಾಹನಗಳ‌ ಸಂಚಾರಕ್ಕೆ ಅನುಮತಿ ನೀಡಿದ್ದಾರೆ.

ಮಳೆ- ಗುಡ್ಡ ಕುಸಿತದಿಂದ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವಾಹನ ಸಂಚಾರಕ್ಕೆ ಮಾತ್ರ ಅವಕಾಶವಿದ್ದು ಸೆ.1 ರಿಂದ ಲಘು ವಾಹನಗಳ ಜೊತೆ ಕೆ.ಎಸ್.ಆರ್.ಟಿ.ಸಿ, ಮಿನಿ ಬಸ್ ಹಾಗೂ ರಾತ್ರಿ ಸಂಚಾರಕ್ಕೆ ಚಿಕಮಗಳೂರು ಜಿಲ್ಲೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ನೀಡಿದ್ದಾರೆ

READ ALSO