ಚಾರ್ಮಾಡಿ ಘಾಟ್ ನಲ್ಲಿ ಪಾದಯಾತ್ರೆ ಬರುತ್ತಿದ್ದವರಿಗೆ ಡಿಕ್ಕಿ ಹೊಡೆದ ಟಿಟಿ ವಾಹನ!

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವೊಂದು ಧರ್ಮಸ್ಥಳ ಕ್ಷೇತ್ರಕ್ಕೆ ಶಿವರಾತ್ರಿಗೆಂದು ಬರುತ್ತಿದ್ದ ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ.

ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ಉಳಿದ 10 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

READ ALSO

ಚಾರ್ಮಾಡಿ ಘಾಟ್ ಎರಡನೇ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ 12 ಮಂದಿ ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.