ರಾಜ್ಯದಲ್ಲಿ ಮತ್ತೊಂದು ಜಿಲೇಟಿನ್ ಸ್ಫೋಟ! ಐವರ ದುರ್ಮರಣ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೆ ಮತ್ತೆ ಸ್ಫೋಟದ ಸುದ್ಧಿ ಸುದ್ಧಿಯಾಗುತ್ತಲೇ ಇದೆ ಆದರೆ ಸರಕಾರ ಮಾತ್ರ ಕಣ್ಣುಮುಚ್ಚಿ ಕೂತಂತಿದೆ. ಅಕ್ರಮವನ್ನು ಸಕ್ರಮ ಮಾಡಲು ಹೊರಟವರಿಗೆ ಜಿಲೆಟಿನ್ ಸಾಗಾಟಕ್ಕೂ ನೀತಿ ನಿಯಮ ರೂಪಿಸಲು ಸಾಧ್ಯವಿಲ್ಲವೇ??? ರ2ಜ್ಯದಲ್ಲಿ ಇಷ್ಟೋಂದು ಪ್ರಮಾಣದಲ್ಲಿ ಜಿಲೆಟಿನ್ ಸ್ಫೋಟಗೊಳ್ಳುತಿವೆ ಎಂದಾದರೆ ರಾಜ್ಯದ ಭದ್ರತೆಯ ಬಗ್ಗೆ ಆಲೋಚಿಸಬೇಕಲ್ಲವೇ????? ಇದೀಗ ಶಿವಮೊಗ್ಗದ ಹುಣಸೋಡು ಕಲ್ಲುಕ್ವಾರಿ ಸ್ಪೋಟ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಇಂತಹದ್ದೇ ಸ್ಪೋಟ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲೆಟಿನ್ ಸ್ಪೋಟದಿಂದ 5 ಮಂದಿ ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಭ್ರಮರವಾಸಿನಿ ಕ್ರಷರ್ ನಿಂದ ಸರಿಸುಮಾರು ಒಂದೂವರೆ ಕಿಲೋಮೀಟರ್ ದೂರದ ಅರಣ್ಯಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗೆ ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಗಂಗಾಧರ್, ಮುರುಳಿ, ಮಹೇಶ್, ರಾಮು ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದು, ಗಾಯಗೊಂಡ ಓರ್ವವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಹುಣಸೋಡು ಸ್ಪೋಟದ ಬೆನ್ನಲ್ಲೇ ಕಲ್ಲುಕ್ವಾರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಹೀಗಾಗಿ ಸ್ಥಳೀಯ ಬಿಜೆಪಿ ಮುಖಂಡ ನಾಗರಾಜು ಹಾಗೂ ಆಂಧ್ರಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಅವರಿಗೆ ಸೇರಿದಂ ಕ್ರಷರ್ ನಲ್ಲಿದ್ದ ಸ್ಪೋಟಕಗಳನ್ನು ಭ್ರಮರವಾಸಿನಿ ಕ್ರಷರ್ ನಿಂದ ಸುಮಾರು 1 ಕಿ.ಮೀ. ದೂರದಲ್ಲಿರುವ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದರು. ನಿನ್ನೆ ತಡರಾತ್ರಿ ಟಾಟಾ ಏಸ್ ಹಾಗೂ ಬೈಕ್ ಮೂಲಕ ಸ್ಪೋಟಕಗಳಿರುವ ಪ್ರದೇಶಕ್ಕೆ ತೆರಳಿದ್ದರು. ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಹಾಗೂ ಎಲೆಕ್ಟ್ರಿಕ್ ಡಿಟೋನೇಟರ್ಸ್ ಹೊತ್ತು ತರಲು ಮುಂದಾಗಿದ್ದರು. ಆದರೆ ವಾಹನದಲ್ಲಿ ಸ್ಪೋಟಕಗಳನ್ನು ತರುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ.

ಮೃತದೇಹಗಳು ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಡಿ ಸಿ ಆರ್ ಲತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ