ಬೆಳ್ತಂಗಡಿ: ಚಿಕ್ಕಮಗಳೂರಿನ ವಕೀಲರಾದ ಶ್ರೀ ಪ್ರೀತಂ ಎಂಬವರಿಗೆ ದಿನಾಂಕ: 30-11-2023ರಂದು ಚಿಕ್ಕಮಗಳೂರು ಪೋಲೀಸರು, ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿ, ನಂತರ ಠಾಣೆಗೆ ಕರೆದೊಯ್ದು ಠಾಣೆಯಲ್ಲಿ ಅಕ್ರಮ ಬಂಧನದಲ್ಲಿರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಕುರಿತು ಮಾನ್ಯ ಮುಖ್ಯಮಂತ್ರಿ ಯವರಿಗೆ ಬೆಳ್ತಂಗಡಿ BAR association ವತಿಯಿಂದ ತಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ನ್ಯಾಯಾಂಗದ ಅವಿಭಾಜ್ಯ ಅಂಗವಾಗಿ ಕೆಲಸ ಮಾಡುತ್ತಿರುವ ವಕೀಲ ಸಮುದಾಯದ ಮೇಲೆ ಈ ರೀತಿಯ ಹಲ್ಲೆ ಮತ್ತು ದೌರ್ಜನ್ಯವನ್ನು ನಮ್ಮ ಬೆಳ್ತಂಗಡಿ ವಕೀಲರ ಸಂಘ ಅತ್ಯಂತ ತೀವ್ರವಾಗಿ ಖಂಡಿಸುತ್ತದೆ.
ಈ ರೀತಿ ಅಮಾನುಷ ಮತ್ತು ಕಾನೂನುಬಾಹಿರ ಕೃತ್ಯದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಪೋಲೀಸರನ್ನು ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿಯೂ ಹಾಗೂ ಮುಂದೆಂದಿಗೂ ಇಂತಹ ಕೆಟ್ಟ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕಾಗಿಯೂ ಈ ಮೂಲಕ ಆಗ್ರಹಿಸುತ್ತೇವೆ. ಹಾಗೂ ಇದಕ್ಕೆ ತಪ್ಪಿದ್ದಲ್ಲಿ ಮುಂದಕ್ಕೆ ಕಠಿಣ ಹೋರಾಟ ನಮಗೆ ಅನಿವಾರ್ಯವಾಗುತ್ತದೆ ಎಂಬುದಾಗಿಯೂ ಈ ಮೂಲಕ ತಿಳಿಯಪಡಿಸುತ್ತೇವೆ. ಎಂದು ಬೆಳ್ತಂಗಡಿ BAR association ವತಿಯಿಂದ ಮಾನ್ಯ ಮುಖ್ಯಮಂತ್ರಿಯವರಿಗೆ ಬೆಳ್ತಂಗಡಿ ತಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.