ಯುವಜನತೆ ಸಂಸ್ಕಾರ ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಭವ್ಯ ಭಾರತದ ನಿರ್ಮಾಣದಲ್ಲಿ ಪಾಲ್ಗೋಳ್ಳಿ: ಸುರೇಶ್ ಪರ್ಕಳ

ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮದ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ ಕಡಿರುದ್ಯಾವರ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ, ಚಿರಂಜೀವಿ ಉತ್ಸವ ಆಚರಣಾ ಸಮಿತಿ ಕಾನರ್ಪ ಕಡಿರುದ್ಯಾವರ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಚಿರಂಜೀವಿ ಉತ್ಸವ 2023 ಕಾರ್ಯಕ್ರಮವನ್ನು ಸ.ಹಿ.ಪ್ರಾ.ಶಾಲೆ ಕೊಡಿಯಾಲ್ ಬೈಲ್ ಕಾನರ್ಪದಲ್ಲಿ ಉದ್ಯಮಿಗಳಾದ ಪ್ರಹ್ಲಾದ್ ಫಡಕೆ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮೀಣ ಕ್ರೀಡಾಕೂಟ ಹಾಗೂ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟ, ಸಾಧಕರ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಅಂಗನವಾಡಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು
ಅಂಗನವಾಡಿ ಮಕ್ಕಳಿಗೆ ಆಟೋಟ ಸ್ಪರ್ಧೆಗಳ ಬಹುಮಾನ ವಿತರಣೆ

ಸಮಾರೋಪ ಸಮಾರಂಭದಲ್ಲಿ ಸುರೇಶ್ ಪರ್ಕಳ ರವರು ಮಾತನಾಡುತ್ತಾ ಇಂದಿನ ಯುವಜನತೆ ಧಾರ್ಮಿಕ ಹಾಗೂ ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಹಾಗೂ ಭವ್ಯ ಭಾರತದ ನಿರ್ಮಾಣದಲ್ಲಿ ಹೆಚ್ಚು ಅಮ್ಮ ಎಂಬ ಪದವು ಬಹಳ ಅರ್ಥಪೂರ್ಣವಾಗಿರುವುದು ಇತ್ತೀಚಿಗೆ ಶಿಕ್ಷಣ ಪದ್ಧತಿ ಬದಲಾಗುತ್ತಾ ನಮಗೆ ಅರಿವಿಲ್ಲದೇ ಪಾಶ್ಚಾತ್ಯ ಸಂಸ್ಕೃತಿಯ ಕಡೆಗೆ ವಾಲುವಂತೆ ಮಾಡುತ್ತಿದೆ ಹಿಂದೆ ಗುರುಕುಲ ಪದ್ಧತಿಯಲ್ಲಿ ಶಿಕ್ಷಣ ನೀಡುವ ಪದ್ಧತಿ ಇತ್ತು ಬದಲಾದ ಕಾಲಘಟ್ಟದಲ್ಲಿ ಧರ್ಮ ಪ್ರಬೊಧನೆ ಮಾಡಬೇಕಾದ ದೇವಸ್ಥಾನ ,ಮಠಮಂದಿರಗಳಲ್ಲಿ ವ್ಯಾಪಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ‌. ಕಳೆದ 33ವರ್ಷಗಳಿಂದ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯುತ್ತಾ ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಿರುವ ಯುವಕ ಮಂಡಲದಿಂದ ಮಾತ್ರ ಯುವಜನತೆಯನ್ನು ಜಾಗೃತಗೊಳಿಸುವ ಕೆಲಸ ಆಗುತ್ತಿದೆ ಪ್ರತಿಯೊಬ್ಬ ವ್ಯಕ್ತಿಯೂ ದೇಶ ಕಟ್ಟುವ ಜವಾಬ್ದಾರಿಯನ್ನು ಯುವಜನರು ಮಾಡಬೇಕಾಗಿದೆ ಎಂದು ಶುಭ ಹಾರೈಸಿದರು.

ಸಾಧಕರ ಸಮ್ಮಾನ ಕಾರ್ಯಕ್ರಮ


ಈ ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತರಾದ ಬಿಕೆ ದೇವ ರಾವ್ , ಸಾಮಾಜಿಕ ಕ್ಷೇತ್ರದಿಂದ ಕೆ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ ಉಜಿರೆ ,ಶೈಕ್ಷಣಿಕ ಕ್ಷೇತ್ರದಿಂದ ಸುಮಂತ್ ಕುಮಾರ್ ಜೈನ್ ಅಧ್ಯಕ್ಷರು ಎಕ್ಸೆಲ್ ಕಾಲೇಜ್ ಕಾರ್ಮಿಕ ಕ್ಷೇತ್ರದಿಂದ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಸ್ಥಳೀಯ ಕ್ರೀಡಾ ಪ್ರತಿಭೆಗಳಾದ ಕುಮಾರಿ ಗೌತಮಿ,ಕುಮಾರಿ ಧನ್ಯಾ.ಎಸ್,ಕುಮಾರಿ ಪ್ರಾಪ್ತಿ ಅವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಜನಾರ್ಧನ್ ಕೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಬೆಳಾಲು ಇದರ ಧರ್ಮದರ್ಶಿಗಳಾದ ಹರೀಶ್ ಗೌಡ ಬದುಕು ಕಟ್ಟೋಣ ತಂಡದ ಮುಖ್ಯಸ್ಥರು ಹಾಗೂ ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ,ಬೆನಕ ಹಾಸ್ಪಿಟಲ್ ಉಜಿರೆ ಯ ಮೆಡಿಕಲ್ ಡೈರೆಕ್ಟರ್ ಡಾ. ಗೋಪಾಲಕೃಷ್ಣ , ಗ್ರಾಮ ಪಂಚಾಯಿತ್ ಕಡಿರುದ್ಯಾವರದ ಅಧ್ಯಕ್ಷರಾದ ಶ್ರೀಮತಿ ರತ್ನಾವತಿ ಬಾಲಕೃಷ್ಣ, ಕೊಡಿಯಾಲ ಬೈಲು ಶಾಲೆಯ ಎಸ್‌.ಡಿ.ಎಂ.ಸಿ ಯ ಅಧ್ಯಕ್ಷರಾದ ರಾಘವೇಂದ್ರ ಭಟ್ ಶಾಲೆಯ ಮುಖ್ಯೋಪಾಧ್ಯಾಯರಾದ ಫಿಲೋಮಿನಾ ಸಿ.ಜೆ ಆರಕ್ಷಕ ಸಿಬಂದಿ ಜಗದೀಶ್ ಸಾಲಿಯಾನ್, ಉದ್ಯಮಿ ದಿನೇಶ್ ಪೂಜಾರಿ, ಮಹೇಶ್ ಕೆ ಗೌಡ, ಚೆನ್ನಕೇಶವ ನಾಯ್ಕ, ಸುರೇಶ್ ಗೌಡ ಹಿಮರಡ್ಡ ಉದಯಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಪ್ರಜ್ಞಾ ಒಡಿಲ್ನಾಳ ಹಾಗೂ ರಾಜೇಶ ಎಂ ಕಾನರ್ಪ ನಿರೂಪಿಸಿ ರಾಮಚಂದ್ರಗೌಡ ಸ್ವಾಗತಿಸಿ ಜಯರಾಜ್ ಸಾಲಿಯಾನ್ ವಂದಿಸಿದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ