
ಚುಂಚನಗಿರಿ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ದ್ವಿತೀಯ ದಿನದ ಸಿದ್ಧಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆಯು 23.09.2025ನೇ ಮಂಗಳವಾರ ಸಂಜೆ 7:30 ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರಿಗೆ ನೆರವೇರಿಸಲಾಯಿತು.

ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಮೈಸೂರು ಶಾಖೆಯ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಎಲ್ಲಾ ಪೂಜ್ಯ ಸ್ವಾಮೀಜಿಗಳವರು, ಶ್ರೀ ಮಠ ಸದ್ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.


