ರಾಜ್ಯದಲ್ಲಿ ಕೋವಿಡ್ ಸಂಕಷ್ಟದಲ್ಲಿ ನಿರ್ವಹಣೆಗೆ 1,250 ಕೋಟಿ ರೂ. ಪ್ಯಾಕೇಜ್ ಘೋಷಣೆ! ಸಿ.ಎಂ ಘೋಷಿಸಿದ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಪರಿಹಾರ?

ಬೆಂಗಳೂರು : ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 1,250 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಲಾಕ್ ಡೌನ್ ಪ್ಯಾಕೇಜ್ ಘೋಷಣೆ ಕುರಿತಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಹಿರಿಯ ಸಚಿವರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, 1250 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಹೂವು ಬೆಳಗಾರರಿಗೆ ಪ್ರತಿ ಹೆಕ್ಟರ್ ಹೂ ಹಾನಿಗೆ 10 ಸಾವಿರ ಸಹಾಯಧನ, ಹಣ್ಣು ಮತ್ತು ತರಕಾರಿ ಬೆಳಗಾರರಿಗೆ ಒಂದು ಹೆಕ್ಟರ್ ಗೆ 10 ಸಾವಿರ ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.null

ಯಾರಿಗೆ ಎಷ್ಟು ಪರಿಹಾರ?

ಆಟೋ, ಟ್ಯಾಕ್ಸಿ ಚಾಲಕರಿಗೆ 3 ಸಾವಿರ ರೂ. ಸಹಾಯಧನ

ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂ.

ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ.

ರಸ್ತೆ ಬದಿ ವ್ಯಾಪಾರ ಮಾಡೋರಿಗೆ -2 ಸಾವಿರ ರೂ.

ಕಲಾವಿದರು, ಕಲಾತಂಡಗಳಿಗೆ ತಲಾ 3 ಸಾವಿರ ರೂ.

ಗರೀಬ್ ಕಲ್ಯಾಣ ಯೋಜನೆಯಡಿ ಪಡಿತ ಚೀಟಿದಾರರ ಕುಟುಂಬದ ಪ್ರತಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆ

ಬಿಬಿಎಂಪಿ ವ್ಯಾಪ್ತಿ ನಗರ ಪ್ರದೇಶದಲ್ಲಿ ಉಚಿತ ಊಟ ವ್ಯವಸ್ಥೆ

ಕೊರೊನಾ ರೋಗಿಗಳಿಗೆ ಸರ್ಕಾರಿ ಅಸ್ಪತ್ರೆಗಳಲಿ ಉಚಿತ ಚಿಕಿತ್ಸೆ ಸೌಲಭ್ಯ

ಕೋವಿಡ್ ನಿರ್ವಹಣೆಗೆ ಗ್ರಾಮಪಂಚಾಯಿತಿಗಳಿಗೆ ಆರ್ಥಿಕ ನೆರವು

ಸಾಲ ಮರುಪಾವತಿ ಕಂತು 3 ತಿಂಗಳು ಮುಂದೂಡಿಕೆ  ಮಾಡಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ