TRENDING
Next
Prev

ಮಂಗಳೂರಿನ ಗುರುಪುರ ಬಂಗ್ಲೆ ಗುಡ್ಡೆಯಲ್ಲಿ ಗುಡ್ಡಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು : ಮಂಗಳೂರಿನ ಹೊರವಲಯದ ಗುರುಪುರದ ಬಂಗ್ಲೆ ಗುಡ್ಡೆಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಭಾರೀ ಮಳೆಯಿಂದಾಗಿ ಗುರುಪುರ ಸಮೀಪದಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 19 ಮನೆಗಳಲ್ಲಿರುವ 118 ಮಂದಿಯನ್ನು ಸ್ಥಳಾಂತರಗೊಳಿಸಲಾಗಿದ್ದು, ಉಳಿದ 60 ಮನೆಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

READ ALSO

ಈಗಾಗಲೇ ಬೋಡಂತಿಲ ಗ್ರಾಮದ ಬಳಿಯಲ್ಲಿ ಗುರುತಿಸಿರುವ ಜಾಗದಲ್ಲಿ ಮನೆಗಳನ್ನು ನಿರ್ಮಿಸಿ ಎಲ್ಲಾ ಸಂತ್ರಸ್ತರನ್ನು ಸ್ಥಳಾಂತರಿಸುವಂತೆ ಜಿಲ್ಲಾಡಳಿತಕ್ಕೆ ಸಿಎಂ ಸೂಚನೆಯನ್ನು ನೀಡಿದ್ದಾರೆ.