ಲಾಕ್ ಡೌನ್ ಭವಿಷ್ಯ ಇಂದು ನಿರ್ಧಾರ: ಸಿ.ಎಂ ಯಡಿಯೂರಪ್ಪ ರವರು ಇಂದು ಸಂಜೆ 5ಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಲೈವ್ ಬರಲಿದ್ದಾರೆ.

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಒಂದು ವಾರದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಉದ್ದೇಶಿಸಿ ಇಂದು ಸಂಜೆ 5 ಗಂಟೆಗೆ ಭಾಷಣ ಮಾಡಲಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಇಂದು ಸಂಜೆ 5 ಗಂಟೆಗೆ ಫೇಸ್‍ಬುಕ್ ಮತ್ತು ಯುಟ್ಯೂಬ್ ಮೂಲಕ ಲೈವ್ ಬರಲಿದ್ದು, ಸಿಎಂ ಸುಮಾರು 15ನಿಮಿಷ ಕಾಲ ಲೈವ್‍ನಲ್ಲಿ ಭಾಷಣ ಮಾಡಲಿದ್ದಾರೆ.

ಈ ಬಗ್ಗೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಇಂದು ಸಂಜೆ 5 ಗಂಟೆಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ. ನನ್ನ ಫೇಸ್ ಬುಕ್ ಪೇಜ್ ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಿ ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಸಿಎಂ ಯಡಿಯೂರಪ್ಪ ಅವರು, ಬೆಂಗಳೂರು ಅನ್‍ಲಾಕ್ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಇದಲ್ಲದೆ ಕೊರೋನಾ ಸೋಂಕು ನಿಯಂತ್ರಿಸುವ ಸಂಬಂಧ ಜನತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಿಎಂ ಮಾತನಾಡುವ ಸಾಧ್ಯತೆ ಇದೆ.

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಗಣನೀಯವಾಗಿ ಹೆಚ್ಚಳವಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಒಂದು ವಾರ ಲಾಕ್ಡೌನ್ ಹೇರಿಕೆ ಮಾಡಿತ್ತು. ಬೆಂಗಳೂರು ಬೆನ್ನಲ್ಲೇ ರಾಜ್ಯದ ಇತರೆ ಜಿಲ್ಲೆಗಳೂ ಕೂಡ ಲಾಕ್ಡೌನ್ ಹೇರಿಕೆ ಮಾಡಿದ್ದವು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 7 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 5 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 7 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 13 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 8 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 11 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ