ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಕೊರೊನಾಗೆ ಬಲಿ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದ್ದು, ಕಿಲ್ಲರ್ ಕೊರೊನಾ ಸೋಂಕಿಗೆ ಇದೀಗ ಹಿರಿಯ ಪತ್ರಕರ್ತ, ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ (65) ಬಲಿಯಾಗಿದ್ದಾರೆ.

ಕೊರೊನಾ ಧೃಡವಾದ ಹಿನ್ನೆಲೆ ಕಳೆದ 10 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅವರಿಗೆ ಕೊರೊನಾ ಧೃಡವಾದ ಹಿನ್ನೆಲೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು., ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

READ ALSO

ಹಿರಿಯ ಪತ್ರಕರ್ತರಾಗಿದ್ದ ಮಹದೇವ್ ಪ್ರಕಾಶ್ ಅವರು ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಕೂಡ ಸೇವೆ ಸಲ್ಲಿಸಿದ್ದರು.